Tuesday, January 21, 2025
ಹೆಚ್ಚಿನ ಸುದ್ದಿ

ಬೆಚ್ಚಿಬೀಳಿಸುವ ಘಟನೆ:ಮಹಿಳೆಯ ಅಗಾಂಗ ಕತ್ತರಿಸಿ ಭೀಕರ ಕೊಲೆ – ಕಹಳೆ ನ್ಯೂಸ್

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಂಡಿಹೊಳೆ ಬಳಿ ಯುವತಿ ತಲೆ, ಕೈಕಾಲು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಆರ್ ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಂಡಿಹೊಳೆ ಸಮೀಪದ ಹೇಮಾವತಿ ನದಿಗೆ ದೇಹದ ಭಾಗಗಳನ್ನು ಎಸೆಯಲಾಗಿದೆ. ಎರಡು ದಿನದ ಹಿಂದೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರ ನಾಲೆಯ ಸಮೀಪ ಯುವತಿಯ ದೇಹದ ಭಾಗಗಳು ಕಂಡು ಬಂದಿವೆ. ಇದನ್ನು ಗಮನಿಸಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಾಲೆಯಲ್ಲಿ ದೇಹದ ಭಾಗದ ಜೊತೆ ಕೈಕಾಲು ಕತ್ತರಿಸಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಕಂಡು ಬಂದಿದೆ ಎನ್ನಲಾಗಿದೆ. ಕೈ ಮೇಲೆ ಮೀನಿನ ಚಿತ್ರವಿರುವ ಹಚ್ಚೆ ಗುರುತು ಇದೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು