Recent Posts

Sunday, January 19, 2025
ರಾಜಕೀಯರಾಜ್ಯ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೇ ತಪ್ಪೇನು? ಎಚ್.ಡಿ ಕುಮಾರಸ್ವಾಮಿ- ಕಹಳೆ ನ್ಯೂಸ್

ರಾಮನಗರ: ಸ್ಥಳೀಯ ಚುನಾವಣೆಗಳಲ್ಲಿ ಬೇರೆ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡರೆ ತಪ್ಪೇನು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುವಾರದಿಂದ ಎರಡು ದಿನಗಳ ಕಾಲ ಕ್ಷೇತ್ರ ಪ್ರವಾಸ ಕೈಗೊಂಡಿರುವ ಎಚ್‌ಡಿಕೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಅವರು ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸಮರ್ಥಿಸಿಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ನವಲಗುಂದದಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ಹಾಗಾಗಿ ಸ್ಥಳೀಯವಾಗಿ ಮೂರು ಪಕ್ಷದವರು ಹೊಂದಾಣಿಕೆಯಾಗುತ್ತಿದ್ದಾರೆ. ಅದು ಸ್ಥಳೀಯ ವಿಚಾರ ಎಂದು ಸಮಜಾಯಿಷಿ ನೀಡಿದರು. ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿಯಾಗಿದೆ ಎಂದಾಕ್ಷಣ ಜೆಡಿಎಸ್ ಗೆ ಬಿಜೆಪಿ ಬಗ್ಗೆ ಮೃದುಧೋರಣೆ ಇದೆ ಎಂದು ತಿಳಿಯಬೇಡಿ ಎಂದೂ ಅವರು ಸ್ಪಷ್ಟಪಡಿಸಿದರು.