Monday, January 20, 2025
ಹೆಚ್ಚಿನ ಸುದ್ದಿ

ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ – ಕಹಳೆ ನ್ಯೂಸ್

ವಿಟ್ಲ: ದಕ್ಷಿಣ ಕನ್ನಡ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ ಅಪಘಾತಕ್ಕೀಡಾಗಿದೆ. ಹಾಸನ- ಬೆಂಗಳೂರು ಮಾರ್ಗಮಧ್ಯೆ ಈ ದುರ್ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದ್ದು ರಸ್ತೆಯಿಂದ ಕೆಳಕ್ಕೆ ಉರುಳಿದೆ.ಬಸ್ ಪಲ್ಟಿ ಹೊಡೆದ ತೀವ್ರತೆಗೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ 29 ಮಂದಿ ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಬೆಳಗ್ಗಿನವರಿಗೆ ಪ್ರಜ್ಞೆ ಬಂದಿಲ್ಲ ಎಂದು ತಿಳಿದುಬಂದಿದೆ. ಬಸ್ ರವಿವಾರ ರಾತ್ರಿ ವಿಟ್ಲದಿಂದ ಬೆಂಗಳೂರಿಗೆ ಹೊರಟಿತ್ತು. ಕೆಲವರಷ್ಟೇ ಅಪಾಯದಿಂದ ಪಾರಾಗಿದ್ದು, ಇವರನ್ನು ಪರ್ಯಾಯ ವಾಹನಗಳಲ್ಲಿ ಬೆಂಗಳೂರಿಗೆ ತಲುಪಿಸಲಾಗಿದೆ. ಗಾಯಾಳುಗಳು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನಲ್ಲಿ ವಿಟ್ಲ, ಪುತ್ತೂರು, ಉಪ್ಪಿನಂಗಡಿ ಆಸುಪಾಸಿನವರು ಇದ್ದರು ಎಂದು ತಿಳಿದುಬಂದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು