Tuesday, January 21, 2025
ಹೆಚ್ಚಿನ ಸುದ್ದಿ

ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ – ಕಹಳೆ ನ್ಯೂಸ್

ಬೆಂಗಳೂರು- ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಚರತ್ನ, ಪಂಚಸೂತ್ರ ವಿಧಾನದ ಮೂಲಕ ಜಿಲ್ಲೆಯಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ನಡೆದ ಸಂಘಟನಾ ಸಭೆ ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಬಾರಿ ತಂದಿದ್ದ ಯೋಜನೆಯಿಂದಾಗಿ ಯಶಸ್ವಿಯಾಗಿದ್ದೆವು. ಇದೀಗ ಪಂಚರತ್ನ, ಪಂಚಸೂತ್ರ ವಿಧಾನ ತಂದಿದ್ದೇವೆ. ಒಂದೊಂದು ಸಮುದಾಯವನ್ನೂ ಗುರಿಯಾಗಿಟ್ಟು ಈ ವಿಧಾನ ಅನುಸರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು ಆರು ತಂಡಗಳನ್ನು ಮಾಡಿಕೊಂಡು ಗ್ರಾಮ ಸ್ವರಾಜ್ ಎಂಬ ಕಾರ್ಯಕ್ರಮ ರೂಪಿಸಿ ಅದರಡಿ ಜಿಲ್ಲಾಯಲ್ಲಿ ಎರಡು ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿದೆ. ರಾಜ್ಯದ ನಗರ ಬಿಟ್ಟು ಎಲ್ಲೆಡೆ ಸಮಾವೇಶ ನಡೆಸಲಾಗುವುದು ಎಂದು ವಿವರಿಸಿದರು. ಮೂರು ವಿಧಾನಸಭೆಗಳಿಗೆ ಒಂದು ಸಮಾವೇಶ ನಡೆಸಲು ನಿರ್ಧರಿಸಿದ್ದು, ಈ ಸಮಾವೇಶಗಳನ್ನು ಸಂತೋಷ್ ಜಿ. ಮುನ್ನಡೆಸುತ್ತಾರೆ. ತಾವೂ ಸೇರಿದಂತೆ ಈಶ್ವರಪ್ಪ, ಶೆಟ್ಟರ್, ಆರ್. ಅಶೋಕ್, ಕಾರಜೋಳ, ಸವದಿ ಸೇರಿ ಆರು ತಂಡಗಳು ಕಾರ್ಯ ನಿರ್ವಹಣೆ ಮಾಡಲಿವೆ. ಇದರಲ್ಲಿ ಸಂಸದರು, ಸಚಿವರು, ಶಾಸಕರು ಇರುವರು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಯಕತ್ವದಲ್ಲಿ ಗೊಂದಲ ಇಲ್ಲ: ಬಿಜೆಪಿಯಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ರಾಜ್ಯಾಧ್ಯಕ್ಷನಾದ ನಾನು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಸಂಪುಟ ರಚನೆ ವಿಳಂಬ ಕಾರ್ಯಕರ್ತರು ಮತ್ತು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ತಿಳಿಸಿದರು.
ರಾಜ್ಯದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಯಾವಾಗ ಮಾಡಬೇಕು, ಏನು ಮಾಡಬೇಕು ಎಂಬುದು ಪಕ್ಷಕ್ಕೆ ಗೊತ್ತಿದೆ ಎಂದು ಪ್ರತಿಕ್ರಿಯಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಡಿಸೆಂಬರ್‍ನಲ್ಲಿ ರಾಜ್ಯಕ್ಕೆ ಬರುವರು. ಅವರು ಮೂರು ದಿನಗಳ ಕಾಲ ಸಮಯ ಕೊಟ್ಟಿದ್ದಾರೆ. ಹಾಗಾಗಿ ಬರುವ ದಿನಾಂಕವನ್ನು ನಿಗದಿ ಮಾಡುತ್ತೇವೆ ಎಂದರು. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಡಿ.5ರಂದು ನಡೆಯುವ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸುತ್ತಾರೆ. ಅಲ್ಲಿಂದಲೇ ತಮ್ಮ ಕೆಲಸ ಪ್ರಾರಂಭಿಸುವರು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಓರ್ವ ಸಚಿವರು. ಹಾಗಾಗಿ ಅವರು ಇಲಾಖೆಗೆ ಸಂಬಂಸಿದಂತೆ ದೆಹಲಿಗೆ ಹೋಗಿದ್ದರು. ದೆಹಲಿಗೆ ಹೋದ ಮೇಲೆ ಹಿರಿಯರನ್ನು ಮಾತನಾಡಿಸಿದ್ದಾರೆ. ಹಿರಿಯರನ್ನು ಮಾತನಾಡಿಸೋದು ತಪ್ಪಾ ಎಂದು ಪ್ರಶ್ನಿಸಿದರು. ನಮ್ಮಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ. ರಮೇಶ್ ಜಾರಕಿಹೊಳಿ ಸಚಿವರಾಗಿರುವುದರಿಂದ ಶಾಸಕರನ್ನು ಭೇಟಿ ಮಾಡುವುದು ಸಹಜ ಎಂದು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಅವರ ನಿವಾಸದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿರುತ್ತಾರೆ ಎಂದು ಹೇಳಿದರು.

ರೋಷನ್ ಬೇಗ್ ಬಂಧನ ಒಂದು ಕಾನೂನಿನ ವಿಚಾರ ಎಂದ ಅವರು, ಬಿಜೆಪಿ ಸೇರಲು ಬಯಸಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಬಿಜೆಪಿಯವರು ಸಂಪುಟ ವಿಸ್ತರಣೆ, ನಾಯಕತ್ವ ವಿಚಾರ ಬಿಟ್ಟು ರಾಜ್ಯದ ಅಭಿವೃದ್ಧಿ, ಆಡಳಿತದ ಬಗ್ಗೆ ಗಮನ ಕೊಡಲಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ಸಿದ್ದರಾಮಣ್ಣೋರು ಅಕಾರ ಇಲ್ಲದೆ ಇದ್ದಾಗ ದುಃಖವನ್ನು ಬಹಳ ಸಲ ತೋರ್ಪಡಿಸಿಕೊಳ್ತಾರೆ. ಅಕಾರ ಇದ್ದಾಗ ಅವರ ಆಡಳಿತ ಹೇಗಿತ್ತು ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು.