ನವದೆಹಲಿ: ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ (71) ನಿಧನರಾದರು.
ಒಂದು ತಿಂಗಳ ಹಿಂದೆ ಕರೋನಾ ಸೋಂಕಿಗೆ ಒಳಗಾದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮುಂಜಾನೆ 3.30 ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಮಗ ಫೈಜಾಲ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕರೋನದಿಂದಾಗಿ ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅಕ್ಟೋಬರ್ 1 ರಂದು ಕರೋನಾ ಇರುವುದು ದೃಢವಾದಗಿದೆ ಎಂದು ಸ್ವತಃ ಅವರೇ ಟ್ವಿಟ್ಟರ್ ನಲ್ಲಿ ತಿಳಿಸಿದ್ದರು.
ನಂತರ ಅವರನ್ನು ನವೆಂಬರ್ 15 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ತಿಂಗಳಿಂದ ಕರೋನದೊಂದಿಗೆ ಹೋರಾಡುತ್ತಿದ್ದ ಅಹ್ಮದ್ ಪಟೇಲ್ ಬುಧವಾರ ಮುಂಜಾನೆ 3.30 ರ ಸುಮಾರಿಗೆ ಕೊನೆಯುಸಿರೆಳೆದರು. ಅಹ್ಮದ್ ಪಟೇಲ್ ನಿಧನಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.