Monday, November 18, 2024
ಹೆಚ್ಚಿನ ಸುದ್ದಿ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ರಾಮನ ಹೆಸರು: ಉತ್ತರಪ್ರದೇಶ ಸಂಪುಟ ಅನುಮೋದನೆ – ಕಹಳೆ ನ್ಯೂಸ್

ಲಕ್ನೋ: ದಶಕಗಳಿಂದ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆಯ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿಯ ಸಮಸ್ಯೆ ಕೊನೆಗೂ ಇತ್ಯರ್ಥವಾಗಿ ಅಯೋಧ್ಯೆಯಲ್ಲಿ ಈಗ ರಾಮ ಮಂದಿರ ಕಾರ್ಯ ನಡೆಯುತ್ತಿದೆ. ಹೀಗಾಗಿ ಸದ್ಯ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಯೋಧ್ಯೆ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.

ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿಗಾಗಿ ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಸಿದ್ದತೆ ನಡೆಸಿದೆ.

ಒಪ್ಪಿಗೆ ದೊರೆತ ನಂತರ ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್‌ ವಿಮಾನ ನಿಲ್ದಾಣವೆಂದು ಬದಲಾಯಿಸಲಾಗುತ್ತದೆ.

ಆಗಷ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಶಂಕು ಸ್ಥಾಪನೆಯಾದ ಬಳಿಕ ಅಯೋಧ್ಯೆಯಲ್ಲಿ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಯೋಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ಪ್ರಮುಖ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಯೋಧ್ಯೆಯ ಹೆಸರು ಸೇರಿಸುವತ್ತ ಯೋಗಿ ಸರ್ಕಾರ ಕೆಲಸ ಮಾಡುತ್ತಿದೆ.