Recent Posts

Monday, January 20, 2025
ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಧನ್ಯವಾದ ತಿಳಿಸಿದ ಬಿಜೆಪಿ! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದ ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ.

ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ಡಿ.ಕೆ.ಶಿವಕುಮಾರ್ ಅವರೇ, ಅಕ್ರಮ ಆಸ್ತಿ ಸಂಪಾದಿಸಿದ್ದೇನೆ ಎಂದು ಒಪ್ಪಿಕೊಂಡಿರುವುದಕ್ಕಾಗಿ ಧನ್ಯವಾದಗಳು. ನೀವಿಷ್ಟು ಬಹಿರಂಗವಾಗಿಯೇ ತಪ್ಪನ್ನು ಒಪ್ಪಿಕೊಂಡ ಮೇಲೂ ತನಿಖಾ ಸಂಸ್ಥೆಗಳನ್ನು ಬಿಜೆಪಿ ಸರ್ಕಾರವನ್ನು ದೂರುತ್ತೀರುವುದೇಕೆ? ಮಾಡಿದ್ದುಣ್ಣೋ ಮಹಾರಾಯ ಎಂದು ವ್ಯಂಗ್ಯವಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು