ಬೆಂಗಳೂರು : ಸಂವಿಧಾನ ದಿನ ಆಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.