Recent Posts

Monday, January 20, 2025
ಬೆಳ್ತಂಗಡಿ

ಇಳಂತಿಲದಲ್ಲಿ ನಡೆಯಲಿದೆ ಭಾರತ ಮಾತಾ ಪೂಜನ ಕಾರ್ಯಕ್ರಮ- ಕಹಳೆ ನ್ಯೂಸ್

ಇಳಂತಿಲ: ಕಾಯರ್ಪಾಡಿ ಶಾಲಾ ಮೈದಾನದಲ್ಲಿ ಡಿಸೆಂಬರ್ 6ರಂದು ಭಾರತ ಮಾತಾ ಪೂಜನ ಸಮಿತಿ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಈ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಅಧ್ಯಕ್ಷ ಸ್ಥಾನವನ್ನು ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ ಅವರು ಅಲಂಕರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಬೆಂಗಳೂರು ಕಿಯೋನಿಕ್ಸ್‍ನ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜಾ, ಹಾಗೂ ಗೌರವ ಮುಖ್ಯ ಉಪಸ್ಥಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಭಾಗಿಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು