Monday, January 20, 2025
ಹೆಚ್ಚಿನ ಸುದ್ದಿ

ಗ್ರಾಮ ಪಂಚಾಯತಿ ಚುನಾವಣೆಗಳು ಭವಿಷ್ಯದ ನಾಯಕನನ್ನು ರೂಪಿಸುತ್ತವೆ: ನಳಿನ್ ಕುಮಾರ್ – ಕಹಳೆ ನ್ಯೂಸ್

ಉಡುಪಿ: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಸ್ಥಳೀಯ ಮತ್ತು ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಉಡುಪಿಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಪಂಚಾಯಿತಿಯಿಂದ ಪಾರ್ಲಿಮೆಂಟ್‍ವರೆಗೆ ಕಾಂಗ್ರೆಸ್ ಮುಕ್ತ ಮಾಡುವ ಸಂಕಲ್ಪದೊಂದಿಗೆ ಶೇ.80ರ ಗೆಲುವಿನ ಗುರಿ ಇಟ್ಟಿದ್ದೇವೆ. ಮಹಾತ್ಮ ಗಾಂಧಿಯ ಗ್ರಾಮ ಸ್ವರಾಜ್ಯ, ಪ್ರಧಾನಿಯ ಆದರ್ಶ ಗ್ರಾಮ ಹಾಗೂ ಸಾಮಾನ್ಯ ಕಾರ್ಯಕರ್ತನನ್ನು ನಾಯಕನ್ನಾಗಿಸುವ ಚಿಂತನೆಯಲ್ಲಿ ಈ ಬಾರಿಯ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯ ಆಡಳಿತವನ್ನು ಸಬಲೀಕರಣಗೊಲಿಸಲು ಗ್ರಾಮಪಂಚಾಯತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಕಟೀಲ್ ಹೇಳಿದ್ದಾರೆ. ರಾಜ್ಯದ 5,800 ಗ್ರಾಮ ಪಂಚಾಯತಿಗಳಲ್ಲಿ 96ಸಾವಿರ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಸರ್ಕಾರಗಳು ಮಾಡಿರುವ ಉತ್ತಮ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಸರ್ಕಾರ ಮಾಡಿರುವ ಕೆಲಸಗಳ ಆಧಾರದ ಮೇಲೆ ನಮ್ಮ ಕಾರ್ಯಕರ್ತರು ಮತದಾರರ ಬಳಿ ಮತ ಕೇಳಲಿದ್ದಾರೆ ಎಂದರು. ಸಂಪುಟ ವಿಸ್ತರಣೆಗಾಗಿ ಕೆಲವು ನಾಯಕರು ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಇಂತಹ ವರದಿಗಳನ್ನು ಹಬ್ಬಿಸಬಾರದು, ತಮ್ಮ ತಮ್ಮ ಇಲಾಖೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ದೆಹಲಿಗೆ ತೆರಳಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು