Recent Posts

Monday, January 20, 2025
ಉಡುಪಿ

ಮಲ್ಪೆಯ ಬೋಟು ಮಹಾರಾಷ್ಟ್ರ ಸಮೀಪದ ಸಮುದ್ರದಲ್ಲಿ ಮುಳುಗಡೆ – ಕಹಳೆ ನ್ಯೂಸ್

ಉಡುಪಿ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟೊಂದು ಗೋವಾ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ಗುರುವಾರ ಮುಳುಗಡೆಗೊಂಡಿದೆ.

ಈ ವೇಳೆ ಬೋಟ್‌ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ನ.26ರಂದು ಮಧ್ಯಾಹ್ನ 12:30ರ ಸುಮಾರಿಗೆ ಗೋವಾ-ಮಹಾರಾಷ್ಟ್ರ ಮಧ್ಯೆ ಸುಮಾರು 22 ಮಾರು ಆಳ ದೂರ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನ ತಳಭಾಗಕ್ಕೆ ವಸ್ತುವೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಬೋಟಿನ ಹಲ್ ಒಡೆದು ಸ್ಟೋರೇಜ್ ಮೂಲಕ ಸಮುದ್ರದ ನೀರು ಬೋಟಿನ ಒಳಗೆ ಬರಲು ಆರಂಭಿಸಿತು. ಅಪಾಯವನ್ನರಿತ ಅದರಲ್ಲಿದ್ದ ಮೀನುಗಾರರು ಸಮೀಪದಲ್ಲಿದ್ದ ಮಾಹೂರ್ ಬೋಟಿನವರು ಮಾಹಿತಿ ನೀಡಿ ದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನವರು, ಮುಳುಗಡೆಯಾಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು. ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಿ ಮಲ್ಪೆ ಬಂದರಿಗೆ ಕರೆತರಲಾಗಿದೆ. ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.