Recent Posts

Monday, January 20, 2025
ಹೆಚ್ಚಿನ ಸುದ್ದಿ

ನಾಳೆ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ(ನಿ.)ದ  ಅಮೃತ ವಾಹಿನಿ ಸಭಾಭವನ ಮತ್ತು ದಾಸ್ತಾನು ಕೊಠಡಿಯ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ(ನಿ.)ದ ವತಿಯಿಂದ ಅಮೃತ ವಾಹಿನಿ ಸಭಾಭವನ ಮತ್ತು ದಾಸ್ತಾನು ಕೊಠಡಿಯ ಉದ್ಘಾಟನಾ ಸಮಾರಂಭ ನಾಳೆ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ನಡೆಯಲಿದೆ. ಸಭಾಭವನವನ್ನು ಶಾಸಕರಾದ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ.

ದಾಸ್ತಾನು ಕೊಠಡಿಯನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ನಾಮ ಫಲಕವನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ಉಪಾಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಅನಾವರಣಗೊಳಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಅಧ್ಯಕ್ಷರಾದ ಮಮತಾ ಲೋಕೇಶ್ ಗೌಡ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ, ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ನಿರ್ದೇಶಕರಾದ ಬಿ.ನಿರಂಜನ್, ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ನಿರ್ದೇಶಕರಾದ ಕೆ.ನಾರಾಯಣ ಪ್ರಕಾಶ್, ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ನಿರ್ದೇಶಕರಾದ ಜಯರಾಮ ರೈ, ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ನಿರ್ದೇಶಕರಾದ ಸವಿತಾ ಎನ್.ಶೆಟ್ಟಿ, ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಟಿ.ಸುರೇಶ್, ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಧರ್ಮಸ್ಥಳದ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ವಹಿಸಲಿದ್ದಾರೆ. ಗೌರವ ಉಪಸ್ಥಿತಿಯಾಗಿ ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ವ್ಯವಸ್ಥಾಪಕರಾದ ಡಾ.ನಿತ್ಯಾನಂದ ಭಕ್ತ, ದಕ್ಷಿಣ ಕನ್ನಡ ಹಾಲು ಒಕ್ಕೂಟ ಕುಲಶೇಖರ ಮಂಗಳೂರಿನ ಉಪ ವ್ಯವಸ್ಥಾಪಕರಾದ ರಾಮಕೃಷ್ಣ ಭಟ್, ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ, ಇಳಂತಿಲ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ, ಬಂದಾರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ಕಾರ್ತಿಕ್, ಬಂದಾರು ಹಾ.ಉ.ಮ.ಸ.ಸಂಘದ ಸ್ಥಾಪಕರಾದ ಲಕ್ಷ್ಮಣ ಗೌಡ ಕೊಂಬೇಡಿ ಭಾಗಿಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು