Tuesday, January 21, 2025
ಉಡುಪಿ

ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ಡಿಕ್ಕಿ, ಯುವತಿ ಸಾವು : ಉಡುಪಿಯಲ್ಲಿ ಸಂಭವಿಸಿದ ದುರಂತ! -ಕಹಳೆ ನ್ಯೂಸ್

ಉಡುಪಿ: ದ್ವಿಚಕ್ರ ವಾಹನಕ್ಕೆ ಫಾರ್ಚೂನ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸಾವನ್ನಪ್ಪಿ, ಆಕೆಯ ಸ್ನೇಹಿತೆ ಗಂಭೀರ ಗಾಯಗೊಂಡ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 22ರಲ್ಲಿ ನಡೆದಿದೆ.

ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಮೃತಪಟ್ಟ ಯುವತಿ. ಉಜಿರೆ ಮೂಲದ ಸ್ನೇಹಿತೆ ಪ್ರಜ್ನಾ (25) ಗಂಭೀರ ಗಾಯಗೊಂಡಿದ್ದಾರೆ. ಉಡುಪಿಯ ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಯುವತಿಯರು ತೆರಳುತ್ತಿದ್ದಾಗ, ಫಾರ್ಚೂನ್ ವಾಹನ ವೇಗವಾಗಿ ಬಂದು ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿತ್ತು.ನಂತರ ಆಸ್ಪತ್ರೆಗೆ ದಾಖಲಿಸಿದಾಗ ಶ್ರೇಯಾ ಶಾನುಭಾಗ್ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ. ಪ್ರಜ್ನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದಾಗ ಸ್ಥಳೀಯರು, ಸಾಸ್ತಾನ ಟೋಲ್ ಬಳಿ ವಾಹನ ತಡೆದು‌ ಕೋಟ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು