Saturday, November 16, 2024
ಹೆಚ್ಚಿನ ಸುದ್ದಿ

ಇನ್ನು ಮುಂದೆ ರೈಲ್ವೆ ನಿಲ್ದಾಣದಲ್ಲಿ ಟೀ ಕುಡಿಯೋಕೆ ಸಿಗಲ್ಲ ಪ್ಲಾಸ್ಟಿಕ್​ ಕಪ್​; ಮಣ್ಣಿನ ಲೋಟದಲ್ಲೇ ಸವಿಯಿರಿ ಬಿಸಿಬಿಸಿ ಚಹಾ! – ಕಹಳೆ ನ್ಯೂಸ್

ನವದೆಹಲಿ: ದೇಶದ ಎಲ್ಲಾ ರೇಲ್ವೆ ನಿಲ್ದಾಣದಲ್ಲಿ ಚಹಾ ಕುಡಿಯಲು ಪ್ಲಾಸ್ಟಿಕ್ ಕಪ್‌ಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಕಪ್ (ಕುಲ್ಹಾಡ್ಸ್)ಗಳನ್ನು ಮಾತ್ರ ಬಳಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಧಿಗವಾರ ರೇಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ದೇಶದ ಸುಮಾರು 400 ರೇಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕಪ್ ಬಳಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರೇಲ್ವೆ ನಿಲ್ದಾಣಗಳಲ್ಲಿಯೂ ಇದೇ ಯೋಜನೆ ತರಲಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದು ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ರೇಲ್ವೆ ಇಲಾಖೆಯ ಕೊಡುಗೆ. ಅಲ್ಲದೇ ಮಣ್ಣಿನ ಕಪ್​ಗಳು ಪರಿಸರಕ್ಕೆ ಯಾವುದೇ ಹಾನಿ ಮಾಡುವುದಿಲ್ಲ. ಇದರ ತಯಾರಿಕೆಯಿಂದ ಲಕ್ಷಾಂತರ ಜನರು ಉದ್ಯೋಗ ಪಡೆಯಬಹುದು ಎಂದು ಗೋಯಲ್ ತಿಳಿಸಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು