Recent Posts

Sunday, January 19, 2025
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ : ಪಿಕಪ್ ಢಿಕ್ಕಿ ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು – ಕಹಳೆ ನ್ಯೂಸ್

ಬೈಕಿಗೆ ಪಿಕಪ್ ಢಿಕ್ಕಿಯಾಗಿ ಪರಾರಿಯಾಗಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಕಲ್ಲೇರಿಯ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ.

ಉರುವಾಲು ನಿವಾಸಿ ಕೃಷ್ಣಪ್ರಸಾದ್ ಶೆಟ್ಟಿ (36) ಹಾಗೂ ಕಣಿಯೂರಿನ ಜಯರಾಮ ಗೌಡ (28) ಮೃತರು ಎಂದು ಗುರುತಿಸಲಾಗಿದೆ. ಇಂದು ರಾತ್ರಿ ಉಪ್ಪಿನಂಗಡಿ ಕಡೆಯಿಂದ ಕಲ್ಲೇರಿ ಕಡೆ ಇವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರು ಕಡೆಯಿಂದ ಅತೀ ವೇಗದಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿಯಾಗಿದೆ. ಈ ಸಂದರ್ಭ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತವೆಸಗಿದ ಪಿಕಪ್ ನೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು