Recent Posts

Sunday, January 19, 2025
ಹೆಚ್ಚಿನ ಸುದ್ದಿ

ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಸೋಮವಾರ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಯಲ್ಲಿರಲಿದೆ.

ಗ್ರಾಮ ಪಂಚಾಯಿತಿಯ ಮೊದಲ ಹಂತದ ಚುನಾವಣೆ ಡಿಸೆಂಬರ್​ 22 ಹಾಗೂ ಎರಡನೇ ಹಂತದ ಚುನಾವಣೆ ಡಿ.27ಕ್ಕೆ ನಿಗದಿಯಾಗಿದೆ. ಇಂದಿನಿಂದ ಡಿ.31ರವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ರಾಜ್ಯ ಚುನಾವಣಾ ಆಯೋಗ ಇಂದು ಬೆಳಗ್ಗೆ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಈ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಎಲ್ಲ ಹೊಸ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆಗೆ ಬ್ರೇಕ್ ಬೀಳಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. ಕಾಂಗ್ರೆಸ್ ಈಗ ತಾನೆ ಚುನಾವಣಾ ತಯಾರಿಗೆ ಮುಂದಾಗಿದೆ. ಸುಮಾರು 5800 ಗ್ರಾಮ ಪಂಚಾಯಿತಿಗಳ 85000 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬೇರು ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಈ ಚುನಾವಣೆ ಪ್ರಮುಖ‌ ಪಾತ್ರವಹಿಸಲಿದೆ. ಹಾಗಾಗಿ ಈ ಚುನಾವಣೆಯನ್ನು ಮೂರು ರಾಜಕೀಯ ಪಕ್ಷಗಳು ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಳ್ಳಲಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು