Sunday, January 19, 2025
ಹೆಚ್ಚಿನ ಸುದ್ದಿ

ಮಾಣಿ: ಬುಡೋಳಿ ರಸ್ತೆಗೆ ಉರುಳಿದ ಲಾರಿ; ಚಾಲಕ ಪಾರು – ಕಹಳೆ ನ್ಯೂಸ್

ವಿಟ್ಲ : ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಈ ಲಾರಿ ಮುಂಜಾನೆ 4:30 ಸುಮಾರಿಗೆ ಬುಡೋಳಿ ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿದ ಬಿದ್ದಿದೆ ಎನ್ನಲಾಗಿದೆ. ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು