
ಸುಳ್ಯ: ಎರಡು ವಾರಗಳ ಹಿಂದೆ ಪುತ್ತೂರು ತಾಲ್ಲೂಕಿನ ಕೌಡಿಚ್ಚಾರ್ ಬಳಿ ದನ ಅಡ್ಡ ಬಂದಿದ್ದ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಪ್ರವೀಣ್ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ. ಸುಳ್ಯ ತಾಲೂಕಿನ ಅರಂತೋಡು ಪಿಂಡಿ ಮನೆ ನಿವಾಸಿಯಾಗಿರುವ ಪ್ರವೀಣ್ ಅವರಿಗೆ, ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಗಂಭೀರ ಗಾಯಗಳಾಗಿತ್ತು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಇಂದು ಇವರು ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾರೆ.