Recent Posts

Monday, January 20, 2025
ಬಂಟ್ವಾಳ

ಬಂಟ್ವಾಳ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಡಿಮಸ್ಟರಿಂಗ್ ಮತ್ತು ಮತ ಎಣಿಕೆಗಾಗಿ ಸ್ಥಳವನ್ನ ಪರಿಶೀಲಿಸಿದ ಅಧಿಕಾರಿಗಳು-ಕಹಳೆ ನ್ಯೂಸ್

ಬಂಟ್ವಾಳ: ಡಿಸೆಂಬರ್ 22ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಡಿಮಸ್ಟರಿಂಗ್ ಮತ್ತು ಮತ ಎಣಿಕೆಗಾಗಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಮೊಡಂಕಾಪು ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಶಾಲೆಯನ್ನು ಆಯ್ಕೆ ಮಾಡಲಾಗಿದ್ದು, ಇದರನ್ವಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದರು.


ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್. ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಪರಿಶೀಲನೆ ನಡೆಸಿ ವ್ಯವಸ್ಥೆಗಳನ್ನು ಅವಲೋಕಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ದಿವಾಕರ ಮುಗಳಿಯ, ಗ್ರಾಮ ಲೆಕ್ಕಾಧಿಕಾರಿಗಳಾದ ಆಥಿಕ್ ನರಿಕೊಂಬು ನಾಗರಾಜ್, ಪ್ರಶಾಂತ್, ವಿಜೇತಾ, ಹಾಜರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು