
ಹಿಂದೂ ಕಾರ್ಯಕರ್ತರ ಮೇಲಾಗುತ್ತಿದ್ದ ಕೊಲೆ ಯತ್ನ, ಹಲ್ಲೆಗಳು ನಿಯಂತ್ರಣಕ್ಕೆ ಬಂದಿದೆ ಅಂದುಕೊಳ್ಳುತ್ತಿರುವಂತೆ ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಇಂದು ಮುಂಜಾನೆ ವೇಳೆ ಮಾರಣಾಂತಿಕ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಮಾರಾಣಾಂತಿಕ ಹಲ್ಲೆಗೊಳಗಾದ ಭಜರಂಗದಳದ ಕಾರ್ಯಕರ್ತನನ್ನು ನಾಗೇಶ್ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ನಾಗೇಶ್‍ನನ್ನು ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಗೊಂಡಿರುವ ನಾಗೇಶ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿದ್ದಾರೆ ಎಂದು ತಿಳಿದುಬಂದಿದೆ.