Monday, January 20, 2025
ಹೆಚ್ಚಿನ ಸುದ್ದಿ

ಅತ್ಯುತ್ತಮ ವ್ಯವಹಾರ ನಿಮಿತ್ತ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಕುಟಕ್ಕೆ ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅತ್ಯುತ್ತಮ ವ್ಯವಹಾರ ನಿಮಿತ್ತ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿಯಮಿತದಲ್ಲಿ ಅತ್ಯುತ್ತಮ ವ್ಯವಹಾರಮಾಡುವ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನೀಡುವ 2019/20ನೇ ಸಾಲಿನ ಪ್ರಶಸ್ತಿಯನ್ನ ಬೆಳ್ತಂಗಡಿ ತಾಲೂಕು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದ್ವಿತೀಯ ಸ್ಥಾನವನ್ನು ತನ್ನ ಮುಡಿಗೇರಿಸಿಕೊಂಡಿದೆ. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಈ ಗೌರವ ಪ್ರಾಪ್ತಿಯಾಗಲು ಸಹಕರಿಸಿದ, ಸಹಕಾರಿ ಸಂಘದ ಕಾರ್ಯಕ್ಷೇತ್ರ ವ್ಯಾಪ್ತಿಯ ಎಲ್ಲಾ ಕೃಷಿಕ ಬಂಧುಗಳಿಗೆ, ಸರ್ವ ಸದಸ್ಯರಿಗೆ, ನಿರ್ದೇಶಕರಿಗೆ, ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ, ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು