Monday, January 20, 2025
ಹೆಚ್ಚಿನ ಸುದ್ದಿ

ಕರ್ನಾಟಕ ಬಂದ್: ಬೆಂಗಳೂರಲ್ಲಿ ನೂರಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು ವಶಕ್ಕೆ ಪಡೆದ ಪೊಲೀಸರು – ಕಹಳೆ ನ್ಯೂಸ್

ಬೆಂಗಳೂರು: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ಮರಾಠ ಅಭಿವೃದ್ಧಿ ಸ್ಥಾಪನೆ ವಿರೋಧಿಸಿ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.ಇಂದು ಬೆಳಗ್ಗೆ ಟೌನ್‌ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಹೊರಡಲಿದ್ದಾರೆ. ಹೀಗಾಗಿ ಟೌನ್ ಹಾಲ್ ಬಳಿ ಪೊಲೀಸ್ ಭದ್ರತೆ ಹೆಚ್ಚು ಮಾಡಲಾಗಿದೆ. ಒಬ್ಬರು ಇಬ್ಬರು ಎಸಿಪಿ, ಒಬ್ಬರು ಡಿಸಿಪಿ ನೇತೃತ್ವದಲ್ಲಿ 200 ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ನಿಯಂತ್ರಣಕ್ಕೆ ವಾಟರ್ ಜೆಟ್ ಕೂಡ ತರಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ಎಲ್ಲಾ ಡಿವಿಜನ್ ಗಳಲ್ಲೂ, ಅಪರಾಧ ಹಿನ್ನೆಲೆ ಇರುವ ರೌಡಿಶೀಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ವಿಭಾಗದಲ್ಲಿ ನೂರಕ್ಕೂ ಹೆಚ್ಚು ರೌಡಿಶೀಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೆಲವರನ್ನು ವಶಕ್ಕೆ ಪಡೆದ್ರೆ ಮತ್ತೆ ಕೆಲವರನ್ನು ಬಂದ್, ಪ್ರತಿಭಟನೆ ಹಾಗೂ ಗಲಾಟೆಗಳಲ್ಲಿ ಭಾಗವಹಿಸುವಿದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ. ಇಂದಿನ ಪ್ರತಿಭಟನೆ ಕೊನೆಯಲ್ಲ, ಮರಾಠ ಅಭಿವೃದ್ಧಿ ನಿಗಮವನ್ನು ಹಿಂಪಡೆಯುವವರೆಗೂ ನಾವು ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೆಜೆಸ್ಟಿಕ್‌ನಿಂದ ವಿವಿಧ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಆರಂಭಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಒಂದು ಕೆಎಸ್‍ಆರ್‍ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಟೌನ್‌ಹಾಲ್‌ನಲ್ಲಿ ಈಗಾಗಲೇ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಹಲವು ಕಾಲರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.