Tuesday, January 21, 2025
ಉಡುಪಿ

ಉಡುಪಿ: ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ – ಕಹಳೆ ನ್ಯೂಸ್

ಉಡುಪಿ : ರಾಜ್ಯ ಸರಕಾರವು ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಇಂದಿನ ಬಂದ್‌ಗೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿಯೂ ಅಂಗಡಿಮುಗ್ಗಟ್ಟುಗಳು ಎಂದಿನಂತೆ ತೆರೆದಿರುವುದು ಕಂಡುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜನ ಹಾಗೂ ವಾಹನ ಸಂಚಾರ ಸಾಮಾನ್ಯವಾಗಿದ್ದು, ಉಡುಪಿ ಸರ್ವಿಸ್, ಸಿಟಿ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳು ಓಡಾಟ ನಡೆಸುತ್ತಿವೆ. ಯಾವುದೇ ಕನ್ನಡ ಸಂಘಟನೆಗಳು ಎಲ್ಲೂ ಪ್ರತಿಭಟನೆ ನಡೆಸಿರುವ ಬಗ್ಗೆ ವರದಿಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ನಗರದ ಸರ್ವಿಸ್ ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು