Recent Posts

Monday, April 7, 2025
ಬಂಟ್ವಾಳಸುದ್ದಿ

ಬಂಟ್ವಾಳ: ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ಪಂಚಾಯತ್ ಮಾಜಿ ಸದಸ್ಯ ಡಿ.ಕೆ‌.ಹಂಝ ಸಹಿತ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮವಂತೂರು, ಚಂದ್ರಹಾಸ ಕರ್ಕೆರ ಅರಳ, ಮುಸ್ತಫ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ ಹಂತದವರೆಗೂ ಬಿಜೆಪಿ ಪರ ಒಲವು ಇದೆ, ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ 39 ಗ್ರಾಮ ಪಂಚಾಯತ್ ಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು ರಾಜೇಶ್ ನಾಯ್ಕ್ ಹೇಳಿದರು. ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ದೇವಪ್ಪ ಪೂಜಾರಿ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ರೊನಾಲ್ಡ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರೈತ ಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಗಣೇಶ್ ರೈ ಮಾಣಿ., ಸೀತಾರಾಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ