Tuesday, January 21, 2025
ಹೆಚ್ಚಿನ ಸುದ್ದಿ

ಅಯೋಧ್ಯೆ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಪುತ್ತೂರು ಜಿಲ್ಲಾ ಕಾರ್ಯಾಲಯವು ಡಿ.7ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿ ಉದ್ಘಾಟನೆ-ಕಹಳೆ ನ್ಯೂಸ್

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮಮಂದಿರಕ್ಕೆ ಎಲ್ಲಾ ಹಿಂದುಗಳ ಸಹಬಾಗಿತ್ವ ಇರಬೇಕೆನ್ನುವ ನಿಟ್ಟಿನಲ್ಲಿ ನಿಧಿ ಸಂಗ್ರಹಕ್ಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮುಂದಿನ ಜನವರಿ 15 ರಿಂದ ಫೆಬ್ರವರಿ 27 ರವರೆಗೆ 45 ದಿನಗಳ ಕಾಲ ಈ ವಿಶೇಷ ಅಭಿಯಾನ ಇಡೀ ದೇಶಾದ್ಯಂತ ನಡೆಯಲಿದ್ದು.


ಈ ಅಭಿಯಾನದ ಪುತ್ತೂರು ಜಿಲ್ಲಾ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ಡಿಸೆಂಬರ್ 7 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಓಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ ಕ್ಷೇತ್ರದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು,ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಪರಿವಾರ ಸಂಘಟನೆಯ ಪ್ರಮುಖರು.ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು