Wednesday, January 22, 2025
ಬಂಟ್ವಾಳ

ಬಂಟ್ವಾಳ: ಭಾರಿ ಕುತೂಹಲದತ್ತ ಚುನಾವಣಾ ಕಣ; ‘ಕೈ’ ತೊರೆದು ‘ತಾವರೆ’ ಹಿಡಿದ ಮಾಜಿ ತಾಲೂಕು ಪಂಚಾಯತ್ ಸದಸ್ಯ; ಬಿಜೆಪಿಗೆ ಶಕ್ತಿಯಾಗಲಿದ್ದಾರಾ ಡಿ.ಕೆ. ಹಂಝ- ಕಹಳೆ ನ್ಯೂಸ್

ಬಂಟ್ವಾಳ: ಕಾಂಗ್ರೆಸ್ ನ ಮಾಜಿ ತಾಪಂ ಸದಸ್ಯ ಸಹಿತ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಹಾಗೂ ನಾಯಕರ ಅಸಮಾಧಾನ ದಿಂದ ಹಾಗೂ ಪಕ್ಷ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಬಂಟ್ವಾಳ ಬಿಜೆಪಿ ಪ್ರಕಟನೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯವಾಗಿ ಜಗದೀಶ್ ಶೆಟ್ಟಿ ಮವಂತೂರು,ಮಾಜಿ ತಾ.ಪಂ ಸದಸ್ಯ ಹಂಝ ಮಂಚಿ, ಚಂದ್ರಹಾಸ ಕರ್ಕೆರಾ ಅರಳ, ಮುಸ್ತಾಫ ಮೂಲರಪಟ್ಣ ಮತ್ತು ಹತ್ತಾರು ಕಾಂಗ್ರೆಸ್ ಕಾರ್ಯಕರ್ತರು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇದೀಗ ಬಂಟ್ವಾಳದಲ್ಲಿ ಮತ್ತೆ ಆಪರೇಶನ್ ಕಮಲ ಪ್ರಾರಂಭವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ.ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ.ಪ್ರ.ಕಾರ್ಯದರ್ಶಿ ಡೊಂಬಯ ಅರಳ.ರೈತಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ.ಕಾರ್ಯದರ್ಶಿಗಳಾದ ರಮಾನಾಥ ರಾಯಿ.ಗಣೇಶ್ ರೈ ಮಾಣಿ.ಸೀತಾರಾಮ ಪೂಜಾರಿ ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.