ಅಯೋಧ್ಯೆ: ಬಾಬರಿ ಮಸೀದಿ ಧ್ವಂಸ ಪ್ರಕರಣವು 28 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿವರ್ಷ ಡಿಸೆಂಬರ್ 6ನ್ನು ಮಸೀದಿ ಧ್ವಂಸ ದಿನವೆಂದು ಆಚರಿಸಲಾಗುತ್ತದೆ.
ಈ ದಿನವನ್ನು ‘ಕಪ್ಪುದಿನ’ವೆಂದು ಪರಿಗಣಿಸಿರುವ ಮುಸ್ಲೀಮರು, 16ನೇ ಶತಮಾನದ ಮಸೀದಿಯನ್ನು ಪುನರ್‌ನಿರ್ಮಿಸುವಂತೆ ಕೋರಿ ರಾಷ್ಟ್ರಪತಿ ಹಾಗೂ ಪ್ರಧಾನಿ ಅವರಿಗೆ ಪತ್ರಗಳನ್ನು ಬರೆದಿದ್ದಾರೆ. ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಹೋರಾಟ ನಡೆಸುತ್ತಿದ್ದರು. ಈ ವಿಚಾರವಾಗಿ 2019ರಲ್ಲಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಿಸುವಂತೆ ಹಾಗೂ ಮಸೀದಿಗೆ ಪರ್ಯಾಯ ಭೂಮಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು.