Monday, January 20, 2025
ಹೆಚ್ಚಿನ ಸುದ್ದಿ

ನಾಳೆಯ `ಭಾರತ್ ಬಂದ್’ ಗೆ ಖಾಸಗಿ ಶಾಲೆಗಳ ಬೆಂಬಲ : ಆನ್ ಲೈನ್ ಕ್ಲಾಸ್ ಸ್ಥಗಿತ – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ರೈತ ಸಂಘಟನೆಗಳು ಡಿಸೆಂಬರ್ 8 ರ ನಾಳೆಯ ಭಾರತ್ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ ನೀಡಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ.

ರಾಜ್ಯದಲ್ಲೂ ಹಸಿರು ಸೇನೆ, ರಾಜ್ಯ ರೈತ ಸಂಘ ಸೇರಿದಂತೆ ಹಲವು ರೈತ ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಈ ನಡುವೆ ನಾಳಿನ ಬಂದ್ ಗೆ ಖಾಸಗಿ ಶಾಲೆಗಳೂ ಬೆಂಬಲ ಸೂಚಿಸಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ. ನಾಳೆ ಆನ್ ಲೈನ್ ಕ್ಲಾಸ್ ಬಂದ್ ಮಾಡಲಾಗುವುದು ಎಂದು ಖಾಸಗಿ ಶಾಲೆ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಭಾರತ್ ಬಂದ್ ಗೆ ಕಾಂಗ್ರೆಸ್, ಶಿವಸೇನೆ ಸೇರಿದಂತೆ 15 ಕ್ಕೂ ಹೆಚ್ಚು ಪಕ್ಷಗಳು ಬೆಂಬಲ ಸೂಚಿಸಿದ್ದು, ನಾಳೆ ದೇಶಾದ್ಯಂತ ರೈತರ ಪ್ರತಿಭಟನೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು