Recent Posts

Monday, January 20, 2025
ರಾಜ್ಯ

ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಇಲ್ಲ, ಗೋಹತ್ಯೆ ನಿಷೇಧ ಮಸೂದೆ ಮಂಡನೆ – ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಶಿವಮೊಗ್ಗ : ಈ ಬಾರಿಯ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ. ಆದ್ರೇ ಗೋ ಹತ್ಯೆ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಸಾಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದಂತ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಗೋಹತ್ಯೆ ನಿಷೇಧವನ್ನ ಅಂಗೀಕರಿಸುವಂತೆ ಸದಸನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ತಿರಸ್ಕರಿಸಿದ್ದರು ಎಂದರು. ಇನ್ನೂ ಮುಂದುವರೆದು ಮಾತನಾಡಿದ ಅವರು, ಈ ಬಾರಿ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ದೊರೆಯುವ ಭರವಸೆ ಇದೆ. ಆದರೆ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಮಸೂದೆಯನ್ನ ಮಂಡಿಸಲಾಗುವುದು ಈ ಬಾರಿ ಮಂಡಿಸುವುದಿಲ್ಲ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು