BREAKING NEWS : ಚಿರು ಪುತ್ರ, ಮೇಘನಾ ಸೇರಿ ಸುಂದರ್ ರಾಜ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್! – ಕಹಳೆ ನ್ಯೂಸ್
ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ. ನಾನು ಮತ್ತು ಪ್ರಮೀಳಾ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಮೇಘನಾ ತಂದೆ ಸುಂದರ್ ರಾಜ್ ತಿಳಿಸಿದ್ದಾರೆ.