Wednesday, January 22, 2025
ಸುದ್ದಿ

ಡಿಸೆಂಬರ್ 9ರಂದು ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಜಿಲ್ಲಾ ಕಚೇರಿ ಉದ್ಘಾಟನೆ; ಡಾ.ಡಿ ವೀರೇಂದ್ರ ಹೆಗ್ಗಡೆ-ಕಹಳೆ ನ್ಯೂಸ್

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ-2 ಪುತ್ತೂರಿನ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭವು ಸಾಲ್ಮರ ಕೊಟೇಚಾ ಹಾಲಿನಲ್ಲಿ ಡಿಸೆಂಬರ್ 9‌ ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮತ್ತು ಶಾಸಕ ಸಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೆಯೇ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಮಾಜಿ ಶಾಸಕಿ‌ ಶಕುಂತಲಾ ಶೆಟ್ಟಿ, ಪುತ್ತೂರಿನ ಜನಪ್ರಿಯ ವೈದ್ಯ ಡಾ.ಎಂ.ಕೆ. ಪ್ರಸಾದ್ ಭಂಡಾರಿ ಮತ್ತು ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್.ಎಚ್. ಮಂಜುನಾಥ್, ಮುಖ್ಯ ಅತಿಥಿಗಳಾಗಿ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಮಹಾಬಲ ರೈ. ವಳತ್ತಡ್ಕ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಇವರು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು