Recent Posts

Monday, January 20, 2025
ರಾಜ್ಯ

ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ, ಬೇಳೆ ನೀಡಿ: ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಸಂದರ್ಭದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ನೀಡುವುದು ಕಷ್ಟ ಎಂದು ಸರ್ಕಾರ ಹೈಕೋರ್ಟ್‌ಗೆ ಹೇಳಿದೆ.

ಹೀಗಾಗಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ ಹಾಗೂ ಬೇಳೆಯನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲು ಡಿಸೆಂಬರ್ 5ರಂದೇ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 1 ಕೆಜಿ ಅಯೊಡೈಸ್ಡ್ ಉಪ್ಪು, ತೊಗರಿ ಬೇಳೆ ಮತ್ತು ಅಡುಗೆ ಎಣ್ಣೆಯನ್ನು ಐದು ತಿಂಗಳ ಲೆಕ್ಕಾಚಾರದಲ್ಲಿ ವಿತರಿಸಲಾಗುವುದು ಎಂದು ಹೇಳಿದೆ. ಉಪ್ಪು ಮತ್ತು ಅಡುಗೆ ಎಣ್ಣೆ ಬದಲು ತೊಗರಿ ಬೇಳೆಯನ್ನು ಹೆಚ್ಚು ವಿತರಿಸಲು ಸಾಧ್ಯವೇ ಎಂಬುದನ್ನು ಪರಿಗಣಿಸಬೇಕು. ಆದೇಶದಲ್ಲಿ ಇರುವಂತೆ ವಸ್ತುಗಳು ವಿತರಣೆಯಾದರೆ ಅದು ಮಧ್ಯಾಹ್ನದ ಬಿಸಿಯೂಟಕ್ಕೆ ಸಮನಾಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಉಪ್ಪು, ಎಣ್ಣೆ ಮತ್ತು ಬೇಳೆ ಸಂಗ್ರಹಿಸಿ ವಿತರಿಸಲು ಕರ್ನಾಟಕ ಆಹಾರ ನಿಗಮಕ್ಕೆ ನಿರ್ದೇಶನ ನೀಡಲಾಗಿದೆ. ಶಾಲೆಗಳು ಆರಂಭವಾಗಿ ಅಲ್ಲಿಯೇ ಅಡುಗೆ ಮಾಡುವ ವ್ಯವಸ್ಥೆ ಮತ್ತೆ ಜಾರಿಗೆ ಬರುವವರೆಗೆ ಈ ವ್ಯವಸ್ಥೆ ಮುಂದುವರೆಸಲು ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌ಆರ್ ಉಮಾಶಂಕರ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪೀಠಕ್ಕೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು