Wednesday, January 22, 2025
ಹೆಚ್ಚಿನ ಸುದ್ದಿ

ಡಿಸೆಂಬರ್ 10 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ- ಕಹಳೆ ನ್ಯೂಸ್

ಧರ್ಮಸ್ಥಳ: ನಾಡಿನ ಪ್ರವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವವು ಇವತ್ತಿನಿಂದ ಆರಂಭಗೊಳ್ಳಲಿದ್ದು, ಹಾಗೆ ಡಿಸೆಂಬರ್ 13‌ಮತ್ತು 14 ರಂದು 88 ನೇ ವರ್ಷದ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಸರಳ‌ ಕಾರ್ಯಕ್ರಮ ನಡೆಯಲಿದೆ.ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವವು ಡಿಸೆಂಬರ್ 10 ರಂದು ಆರಂಭಕೊಂಡು ಡಿಸೆಂಬರ್ 14 ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ಹಾಗೆ ಡಿಸೆಂಬರ್ 10 ರಿಂದ 14ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ವಿಹಾರ ಹಾಗೂ ಉತ್ಸವಗಳು ನಡೆಯಲಿದ್ದು, ಈ 5 ದಿನ ರಾತ್ರಿ 9 ಗಂಟೆಗೆ ಉತ್ಸವಗಳು ನಡೆಯುತ್ತವೆ. ಮತ್ತು ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ,ಲಲಿತೋದ್ಯಾನ ಉತ್ಸವ, ಕಂಚಿಮಾರುಕಟ್ಟೆ ಉತ್ಸವ, ಮತ್ತು ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ. ಹಾಗೂ ಡಿಸೆಂಬರ್ 15 ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಯಶಸ್ವಿ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಿ,ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥಬೀದಿ, ರಾಜಬೀದಿಗಳನ್ನು, ದೇವಸ್ಥಾನ, ಬೀಡು, ಅನ್ನಪೂರ್ಣ ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಕೃತಗೊಳಿಸಲಾಗಿದೆ. ಕೊರೋನಾ ಹಿನ್ನೆಲೆಯಿಂದ ಕ್ಷೇತ್ರದಲ್ಲಿ ಭಕ್ತರ ಸುರಕ್ಷತೆಯ ನಿಟ್ಟಿನಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಮತ್ತು ಕ್ಷೇತ್ರಕ್ಕೆ ಬರುವ ಭಕ್ತರು ಕಡ್ಡಾಯ ಮಾಸ್ಕ್ ಧರಿಸಬೇಕು.ವಸ್ತು ಪ್ರದರ್ಶನ , ಬೀದಿ ಅಂಗಡಿಗಳು ಇರುವುದಿಲ್ಲ. ಸರ್ಕಾರದ ನಿಯಮದಂತೆ ಲಕ್ಷದೀಪೋತ್ಸವವು ಸರಳ ರೀತಿಯಲ್ಲಿ ಆಚರಣೆಗೊಳ್ಳುತ್ತದೆ. ಈ ಪ್ರಯುಕ್ತ ನಡೆಯುವ ಎಲ್ಲಾ ಧಾರ್ಮಿಕ ಮತ್ತು ಸಂಸ್ಕೃತಿಕ ಕಾರ್ಯಕ್ರಮವನ್ನು ಭಕ್ತರು ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ವೀಕ್ಷಣೆ ಮಾಡಬಹುದು. ಈ ಕಾರ್ಯಕ್ರಮವು” ಶ್ರೀ ಕ್ಷೇತ್ರ ಧರ್ಮಸ್ಥಳ ” ಯೂಟ್ಯೂಬ್, ಫೇಸ್ ಬುಕ್ ,ಮತ್ತು ನಮ್ಮ ಕುಡ್ಲ, ಶ್ರೀ ಶಂಕರ ಟಿವಿ ಯಲ್ಲಿ ನೇರ ವೀಕ್ಷಣೆ ಮಾಡಬಹುದು.ಇಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರಿ ವತಿಯಿಂದ ಉಜಿರೆಯಿಂದ ಧರ್ಮಸ್ಥಳವರೆಗೆ 8 ನೇ ವರ್ಷದ ಪಾದಯಾತ್ರೆ ಕೋವಿಡ್-19 ನಿಯಮಾವಳಿಯಂತೆ ನಡೆಯಲಿದೆ. ಪಾದಯಾತ್ರಿಗಳು ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಬೇಕೆಂದು ಪಾದಯಾತ್ರಿ ಸಮಿತಿ‌ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು