Wednesday, January 22, 2025
ಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ನಾಮಕರಣ ಮಾಡಬೇಕೆಂದು ‌ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ವೈಗೆ ಮನವಿ- ಕಹಳೆ ನ್ಯೂಸ್

ಮಂಗಳೂರು: ಇತಿಹಾಸದ ವೀರ ಪುರುಷರಾದ ಕೋಟಿ ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಅವಿಭಜಿತ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಡಿಸೆಂಬರ್ 10 ರಂದು ಮಾನ್ಯ ಮುಖ್ಯಮಂತ್ರಿ ಶ್ರೀ. ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮನವಿ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಧಾನ ಸಭೆಯ ಮುಖ್ಯ ಸಚೇತರಾದ ಶ್ರೀ ಸುನಿಲ್ ಕುಮಾರ್ ಕಾರ್ಕಳ, ಹಾಗೂ ಶಾಸಕರುಗಳಾದ ಶ್ರೀ ಸಂಜೀವ ಮಠಂದೂರು, ಶ್ರೀ ರಾಜೇಶ್ ನಾಯ್ಕ್, ಶ್ರೀ ರಘುಪತಿ ಭಟ್, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಭರತ್ ಶೆಟ್ಟಿ, ಶ್ರೀ ವೇದವ್ಯಾಸ ಕಾಮತ್,ಶ್ರೀ ಹರೀಶ್ ಪೂಂಜಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು