Wednesday, January 22, 2025
ಬಂಟ್ವಾಳ

ಕರೋಪಾಡಿಯಲ್ಲಿ ಸಿಡಿಲಾಘಾತ; ವ್ಯಕ್ತಿಯೊಬ್ಬರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾವದ ಸಾರ್ಥಕೋಡಿ ಎಂಬಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಡಿಸೆಂಬರ್ 10 ರಂದು ರಾತ್ರಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ ಮೃತಪಟ್ಟವರು ಚಂದಪ್ಪ ಮೂಲ್ಯ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿಯ ಬಳಿಕ ಗುಡುಗು ಸಿಡಿಲು ಇತ್ತು. ಈ ಸಂದರ್ಭದಲ್ಲಿ ಮನೆಗೆ ಸಿಡಿಲು ಬಡಿದು, ಸುಮಾರು 11,30 ರ ಬಳಿಕ ಘಟನೆ ನಡೆದಿದ್ದು, ಇದರಿಂದ ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದಾರೆ. ಕೊಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಮನೆಗೂ ಸಿಡಿಲಾಘಾತದಿಂದ ಹಾನಿಗಳುಂಟಾಗಿ, ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಕಂದಾಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು