ಮುಂಬೈ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ, ರಿಲಾಯನ್ಸ್ ಕಂಪನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ತಾತನಾದ ಸಂಭ್ರಮದಲ್ಲಿದ್ದಾರೆ.
ಮುಕೇಶ್ ಅಂಬಾನಿ-ನೀತಾ ಅಂಬಾನಿಯವರ ಮಗ ಆಕಾಶ್ ಅಂಬಾನಿ ಅವರ ಪತ್ನಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಮುಕೇಶ್ ದಂಪತಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಕೃಷ್ಣ ಪರಮಾತ್ಮನ ದಯೆ ಮತ್ತು ಆಶೀರ್ವಾದದಿಂದ ಶ್ಲೋಕಾ ಹಾಗೂ ಆಕಾಶ್ ಅಂಬಾನಿ ಅವರಿಗೆ ಗಂಡು ಮಗು ಜನನವಾಗಿದೆ ಎಂದು ತಿಳಿಸಿದ್ದಾರೆ. 2019ರ ಮಾರ್ಚ್ ತಿಂಗಳಲ್ಲಿ ಆಕಾಶ್-ಶ್ಲೋಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.