Wednesday, January 22, 2025
ಹೆಚ್ಚಿನ ಸುದ್ದಿ

ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಸೇವನೆ ಮತ್ತು ತಂಬಾಕು ಉತ್ಪನ್ನ ಜಗಿದು ಉಗಿಯುವುದು ಶಿಕ್ಷಾರ್ಹ ಅಪರಾಧ; ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ-ಕಹಳೆ ನ್ಯೂಸ್

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆ ಮತ್ತು ತಂಬಾಕು ಉತ್ಪನ್ನಗಳನ್ನು ಜಗಿದು ಉಗಿಯುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪ್ರಕರಣಗಳು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿಸಿ‌ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಪಾನ್ ಜಗಿದು ಉಗುಳುವುದರಿಂದ ಕೋವಿಡ್-19 ಮತ್ತು ಇತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಈ ಕಾನೂನುನನ್ನು ಉಲ್ಲಂಘನೆ ಮಾಡಿದವರಿಗೆ ರೂ.200 ದಂಡ ವಿಧಿಸಲಾಗುವುದು. ಹಾಗೆಯೇ ಶಾಲಾ ಕಾಲೇಜು ಆವರಣಗಳ 100 ಮೀಟರ್ ಅಂತರದಲ್ಲಿ ತಂಬಾಕು, ಗುಟ್ಕಾ ಮಾರಾಟ ಮಾಡುವುದು ಮತ್ತು ಸೇವನೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಶಾಲಾ ‌ಮುಖ್ಯೋಪಾಧ್ಯಾಯರು ಎಚ್ಚರಿಕೆ ಫಲಕಗಳನ್ನು ಅಳವಡಿಸಿಕೊಳ್ಳಬೇಕು. ಇದನ್ನು ಉಲ್ಲಂಘಿಸಿದರೆ ಕಾನೂನು ರೀತಿಯ ಕ್ರಮ ಕೈಗೊಂಡು ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳು ಹೇಳಿದರು. ತಂಬಾಕು ಸೇವನೆಯಿಂದ ಮಾರಣಾಂತಿಕ ‌ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಮತ್ತು ಅವರಿಂದ ಸೇವನೆ ‌ಮಾಡಿಸುವುದು ಶಿಕ್ಷಾರ್ಹ ಅಪರಾಧ ಎಂದ ಅವರು, ತಂಬಾಕು ಉತ್ಪನ್ನಗಳ ಕುರಿತು ಜಾಹಿರಾತು ಪ್ರಚಾರ, ಪ್ರಯೋಜಕತ್ವದ ಫಲಕಗಳನ್ನು ಪ್ರದರ್ಶಿಸುವುದು ಕೂಡ ಅಪರಾಧ ಅಂತಹವರಿಗೆ ರೂ.1000 ದಂಡ ಮತ್ತು 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಹರಡುವ ಸಾಧ್ಯತೆ ಇದೆ.ಈಗಾಗಿ ಇದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು ಎಂದು ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.ಹಾಗೆ ‌ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ರಾತ್ರಿ ಸಮಯದಲ್ಲಿ ತುರ್ತು ಸೇವೆಗಳ 108 ಅಂಬ್ಯುಲೆನ್ಸ್ ಲಭ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಅಗತ್ಯ ಕ್ರಮ ವಹಿಸಬೇಕು ಹಾಗೂ ಜಿಲ್ಲೆಯ ಅಬಕಾರಿ ಇಲಾಖೆಯು ಎಲ್ಲಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳ ಪ್ರವೇಶ ದ್ವಾರದಲ್ಲಿ ಕೋಟ್ವಾ ಕಾಯ್ದೆಯ ನಾಮಫಲಕ ಪ್ರದರ್ಶಿಸಿ ಧೂಮಪಾನ ಮುಕ್ತ ವಾತಾವರಣವಾಗಿಸಲು ಕ್ರಮವಹಿಸಬೇಕು ಎಂದು ಸೂಚಿಸಿದ್ದು, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಗಳನ್ನು ಪ್ರತಿ 3 ತಿಂಗಳಿಗೊಮ್ಮೆ ಮಾಡಬೇಕೆಂದರು. ಜಿಲ್ಲೆಯಲ್ಲಿ ಜನವರಿ ತಿಂಗಳಿಂದ ಈವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಇನ್ನಿತರ ಒಟ್ಟು 4,778 ಪ್ರಕರಣಗಳು ದಾಖಲಾಗಿದ್ದು, ರೂ 3,08,050 ದಂಡ ವಸೂಲಿ ಮಾಡಲಾಗಿದೆ. ಎಂದು ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಂಯೋಜಕ ಡಾ. ಹನುಮಂತ ರಾಯಪ್ಪ ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ, ವೈದ್ಯಕೀಯ ಅಧೀಕ್ಷಕರು ಲೇಡಿಗೋಶನ್ ಡಾ.ದುರ್ಗಾಪ್ರಸಾದ್, ಜಿಲ್ಲಾ ಸರ್ಜನ್ ಮತ್ತು ಅಧೀಕ್ಷಕರು ಸದಾಶಿವ ಶಾನ್ ಭೋಗ್ , ಜಿಲ್ಲಾ ಸರ್ವೇಕ್ಷಣ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಜಗದೀಶ್, ಸೇರಿದಂತೆ ಮತ್ತಿತರು ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು