Wednesday, January 22, 2025
ಹೆಚ್ಚಿನ ಸುದ್ದಿ

ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್16 ರಿಂದ 21 ರವರೆಗೆ ಕಜಂಬು‌ ಜಾತ್ರೆ- ಕಹಳೆ ನ್ಯೂಸ್

ವಿಟ್ಲ: ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್ 16ರಂದು ಅನುವಂಶಿಕ ಮೊಕ್ತೇಸರರಾದ ವಿಟ್ಲ ಅರಮನೆಯ ಬಂಗಾರು ಅರಸರ ಮುಂದಾಳುತ್ವದಲ್ಲಿ ಕಾಲಾವಧಿ ಕಜಂಬು ಜಾತ್ರೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋವಿಡ್-19 ಸರ್ಕಾರದ ನಿಯಮಾವಳಿಯಂತೆ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಕೃಷ್ಣಯ್ಯ ಬಲ್ಲಾಳ್ ಹೇಳಿದರು. ಈ ಜಾತ್ರೆಯು ಡಿಸೆಂಬರ್ 15ರ ಧನುಸಂಕ್ರಮಣದಂದು ಧ್ವಜಾರೋಹಣಗೊಂಡು, ಡಿಸೆಂಬರ್ 16 ರಂದು ಕಜಂಬು ಉತ್ಸವ ನಡೆಯಲಿದೆ. ಕೋವಿಡ್- 19 ಇರುವ ಕಾರಣ ಕಜಂಬಿನ ಮಕ್ಕಳನ್ನು ಸ್ನಾನ ಮಾಡಿಸುವ ಬದಲಾಗಿ ದೇವರ ತೀರ್ಥ ಪ್ರೋಕ್ಷಣೆ ಮಾಡಲಾಗುತ್ತದೆ. ಹಾಗೆಯೇ ಅಂತರ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ರಾತ್ರಿ 8.30 ರಿಂದ ಕಜಂಬಿನ ಧಾರ್ಮಿಕ ಕಾರ್ಯಗಳು ಆರಂಭಗೊಳ್ಳಲಿದ್ದು, ದೇವಸ್ಥಾನದ ಒಳಗೆ ಯಾರಿಗೂ ಕುಳಿತುಕೊಳ್ಳಲು ಅವಕಾಶವಿಲ್ಲ. ಇದಕ್ಕಾಗಿ ‌ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಚಪ್ಪರದ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗೆ ಡಿಸೆಂಬರ್ 24 ರಂದು ಕೇಪು ಭಂಡಾರ ಕೊಟ್ಟಿಗೆಯಲ್ಲಿ ಮಲರಾಯಿ ಮತ್ತು ಪಿಲಿಚಾಮುಂಡಿ ದೈವಕ್ಕೆ ನೇಮ ನಡೆಯಲಿದೆ ಎಂದು ವಿಟ್ಲ ಪ್ರೆಸ್ ಕ್ಲಬ್‌ನಲ್ಲಿ ಸುದ್ಧಿಗೋಷ್ಠಿ ನಡೆಸಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಪು ಸುಬ್ರಾಯ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ‌ಮತ್ತು ಬಲಿವಾಡು ಕೂಟ ನಡೆಯಲಿದ್ದು, ಡಿಸೆಂಬರ್ 20 ರಂದು ಬಲಿವಾಡು ಕೂಟ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 9.30ಕ್ಕೆ ಉತ್ಸವ ಬಲಿ, ಕಟ್ಟೆ ಪೂಜೆ, ಹಾಗೂ ಡಿಸೆಂಬರ್ 21 ರಂದು ಬೆಳಿಗ್ಗೆ 9 ಕ್ಕೆ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ ಎಂದು ತಿಳಿಸಿದರು. ಡಿಸೆಂಬರ್ 15 ರಂದು ಬೆಳಿಗ್ಗೆ 10.30ಕ್ಕೆ ಕೇಪು ಕಲ್ಲಂಗಳ ದ್ವಾರದ ಬಳಿಯಿಂದ ಹಸಿರುವಾಣಿ ಹೊರಕಾಣಿಕೆ ಮೆರವಣಿಗೆ ನಡೆಯಲಿದ್ದು, ಪ್ರಸಾದ ಭೋಜನದ ವ್ಯವಸ್ಥೆಯನ್ನು ಮಾಡಿದೆ. ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಹಕರಿಸಬೇಕೆಂದು ಕೇಪು ಶ್ರೀ ದುರ್ಗಾಪರಮೇಶ್ವರಿ ಸೇವಾಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ ತಿಳಿಸಿದರು. ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ರಾಜರಾಮ‌ ವರ್ಮ ಉಪಸ್ಥಿತರಿದ್ದರು.