Recent Posts

Monday, April 14, 2025
ಹೆಚ್ಚಿನ ಸುದ್ದಿ

ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‌ತೆರವುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ- ಕಹಳೆ ನ್ಯೂಸ್

ನವದೆಹಲಿ: ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್ ನಡೆಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರೈತರು ಮಾಡುವ ಪ್ರತಿಭಟನೆಯೂ ರಸ್ತೆ ತಡೆಗಳಿಂದಾಗಿ ಪ್ರಯಾಣಿಕರು ಸಮಸ್ಯೆಯನ್ನು ಎದುರಿಸುತ್ತಿದ್ದು, ಜನ ಗುಂಪು ಸೇರುವುದರಿಂದ ಕೋವಿಡ್ ಕೇಸ್ ಗಳ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿ ಕಾನೂನು ವಿದ್ಯಾರ್ಥಿ ರಿಷಭ್ ಶರ್ಮಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ನ್ಯಾ.ಎ ಎಸ್ ಬೋಪಣ್ಣ ಹಾಗೂ ನ್ಯಾ.ವಿ ರಾಮಸುಬ್ರಮಣಿಯನ್ ಡಿಸೆಂಬರ್ 16 ರಂದು ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ