Wednesday, January 22, 2025
ಹೆಚ್ಚಿನ ಸುದ್ದಿ

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ : ಪ್ರಧಾನಿಯಿಂದ ಗೌರವ ನಮನ – ಕಹಳೆ ನ್ಯೂಸ್

ನವದೆಹಲಿ: ಭಾರತದ ಏಕೀಕರಣದ ಪಿತಾಮಹ, ಉಕ್ಕಿನ ಮನುಷ್ಯ, ದೇಶದ ಮೊದಲ ಕಾಂಗ್ರೆಸ್ ಸರ್ಕಾರದ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , ಬಲವಾದ ಮತ್ತು ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸುತ್ತಿದ್ದೇನೆ. ಸರ್ದಾರ್ ಪಟೇಲ್ ಅವರು ದೇಶದ ಏಕತೆ, ಸಮಗ್ರತೆ ಹಾಗೂ ಸಾರ್ವಭೌಮತ್ವವನ್ನು ರಕ್ಷಿಸಲು ತೋರಿಸಿಕೊಟ್ಟಿರುವ ಮಾರ್ಗ ನಮಗೆಲ್ಲರಿಗೂ ಆದರ್ಶವಾಗಿದೆ ಎಂದಿದ್ದಾರೆ. ದೇಶದ ಮೊದಲ ಉಪಪ್ರಧಾನಿ ಆಗಿದ್ದ ಪಟೇಲ್‌ ಅವರು 1950ರ ಡಿಸೆಂಬರ್‌ 15ರಂದು ಸಾವನ್ನಪ್ಪಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು