Sunday, January 19, 2025
ಬೆಂಗಳೂರುರಾಜ್ಯಸಿನಿಮಾ

‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾದ ಹಾಡಿಗೆ ಧ್ವನಿ ನೀಡಿ ಗಾಯಕರಾದ ನಟ ಪೃಥ್ವಿ ಅಂಬರ್..! – ಕಹಳೆ ನ್ಯೂಸ್

ಬೆಂಗಳೂರು, ಡಿ.16 : ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿರುವುದು ಮಾತ್ರವಲ್ಲ ಹಾಡಿಗೆ ಧ್ವನಿ ನೀಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರಕ್ಕೆ ನೊಬಿನ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಸಾಹಿತ್ಯ ರಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ತನ್ನ ಈ ಅನುಭವದ ಬಗ್ಗೆ ಮಾತನಾಡಿದ ನಟ ಪೃಥ್ವಿ ಅಂಬರ್‌, ”ಇದೇ ಮೊದಲ ಬಾರಿಗೆ ಸಿನಿಮಾಕ್ಕೆ ಹಾಡಿದ್ದೇನೆ. ಈ ಮೂಲಕ ನನ್ನ ಬಹುದಿನಗಳ ಕನಸು ನನಸಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಫ್ರೈಡೆ ಫಿಲ್ಮ್ಸ್ ಮತ್ತು ಸಿಲ್ವರ್ ಟ್ರೈನ್ ಇಂಟರ್ ನ್ಯಾಷನಲ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಕ್ಕೆ ಮಲಯಾಳಂ ನಿರ್ದೇಶಕ ಅರುಣ್ ಕುಮಾರ್ ಮತ್ತು ಸಾಬು ಅಲೋಷಿಯಸ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು ‘ಮಮ್ಮಿ’ ಮತ್ತು ‘ದೇವಕಿ’ ಸಿನಿಮಾ ನಿರ್ದೇಶಿಸಿದ್ದ ಲೋಹಿತ್ ಈ ಚಿತ್ರದ ಸಹ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.