Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಹಾಡಹಗಲೇ ಹೆಡ್ ಕಾನ್ಸ್ ಟೇಬಲ್‍ ಮೇಲೆ ಕತ್ತಿಯಿಂದ ದಾಳಿ ; ಗೋಲಿಬಾರ್ ಗೆ ಪ್ರತಿಕಾರದ ಶಂಕೆ..!? SDPI ಹಾಗೂ ಇತರ ಮತೀಯ ಸಂಘಟನೆಯಿಂದ ಕೃತ್ಯ ನಡೆದ ಬಗ್ಗೆ ಶಂಕೆ ವ್ಯಕ್ತ..!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವರಿಗೆ ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ ನಡೆಸಿ ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರಲ್ಲಿ ಓರ್ವ ಬೈಕ್ ನಿಂದ ಇಳಿದು ಪೊಲೀಸರು ಕುಳಿತುಕೊಂಡಲ್ಲಿಗೆ ಹೋಗಿ ಗಣೇಶ್ ಕಾಮತ್ ಗೆ ಕತ್ತಿಯಿಂದ ಒಂದು ಬಾರಿ ಕಡಿದು ಓಡಿ ಬೈಕ್ ಏರಿ ಪರಾರಿಯಾಗಿದ್ದಾರೆ.

ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಅವರ ಕೈಗೆ ಗಾಯವಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ವರ್ಷ ಮಂಗಳೂರಿನಲ್ಲಿ ನಡೆದ ಎನ್.ಆರ್.ಸಿ ಪ್ರತಿಭಟನೆ ವೇಳೆ ಗಲಭೆ ನಡೆದು ಇಬ್ಬರು ಪೊಲೀಸರ ಗೋಲಿಬಾರ್ ಗೆ ಬಲಿಯಾಗಿದ್ದರು. ಈ ಗೊಲೀಬಾರ್ ಗೆ ಪ್ರತಿಕಾರವಾಗಿ ಪೊಲೀಸರ ಮೇಲೆ ಈ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಹಿಂದೆ ಎಸ್.ಡಿ.ಪಿ.ಐ. ಹಾಗೂ ಇತರ ಕೆಲವು ಮಾತಾಂಧ ಸಂಘಟನೆಗಳ ಕೈಪಾಡದ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು