Recent Posts

Monday, January 20, 2025
ಸುದ್ದಿ

ಮಂಗಳೂರಿನ ಖ್ಯಾತ ಉದ್ಯಮಿ ಆರ್. ಎನ್.ಶೆಟ್ಟಿ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್ ಎನ್ ಶೆಟ್ಟಿ(92) ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಆರ್ ಎನ್ ಶೆಟ್ಟಿ ಅವರು ಉದ್ಯಮಿಯಾಗಿ ಬಹುದೊಡ್ಡ ಹೆಸರು ಮಾಡಿದ್ದರು. 1967ರಲ್ಲಿ ಪಾಲುದಾರ ಕಂಪೆನಿಯಾದ ಆರ್ ಎನ್ ಶೆಟ್ಟಿ ಆಂಡ್ ಕಂಪೆನಿ ಆರಂಭಿಸಿದ್ದರು. ಕಂಪೆನಿ ಮೂಲಕ ಅನೇಕ ಸೇತುವೆ, ಅಣೆಕಟ್ಟುಗಳು, ಕಟ್ಟಡಗಳ ನಿರ್ಮಾಣ ಕಾರ್ಯ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೃಷಿಕ ಮನೆತನದಲ್ಲಿ ಜನಿಸಿ, ಉದ್ಯಮದತ್ತ ಮುಖ ಮಾಡಿದ ಆರ್.ಎನ್. ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು