Saturday, November 23, 2024
ಹೆಚ್ಚಿನ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ; ಮಂಗಳೂರು ಶಾಸಕ ಯು.ಟಿ.ಖಾದರ್- ಕಹಳೆ ನ್ಯೂಸ್

ವಿಟ್ಲ:ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ಬದಲಾಗಿ ಕಾಂಗ್ರೆಸ್ ಜಾರಿಗೆ ತಂದ ಹಲವು ಜನಪರ ಯೋಜನೆಗಳನ್ನು ನಿಲ್ಲಿಸಲಾಗಿದೆ ಎಂದು ವಿಟ್ಲದಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಅವರು,ಈ ಬಾರಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮತದಾರರು ನೀಡುವ ಪ್ರತಿಯೊಂದು ಮತವೂ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದರು. ರೇಶನ್ ಕಾರ್ಡ್ ವಿತರಣೆಯಾಗಿಲ್ಲ. ಮನೆ ಹಸ್ತಾಂತರ ಮಾಡಿಲ್ಲ. ಪಿಂಚಣಿ ಕೂಡಾ ಬಡವರಿಗೆ ದೊರೆಯುತ್ತಿಲ್ಲ. ಮರಾಠಿ ನಿಗಮ ಸ್ಥಾಪಿಸಲು ನಮ್ಮ ವಿರೋಧವಿಲ್ಲ. ಆದರೆ ಗಡಿಭಾಗದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕ್ರಮ ಕೈಗೊಳ್ಳಬೇಕು. ಮತ್ತು ಅದಾದ ಬಳಿಕ ನಿಗಮ ಮಂಡಳಿ ಸ್ಥಾಪನೆ ಮಾಡಲಿ ಎಂದು ಆಗ್ರಹಿಸಿದರು. ಈ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಅವರು ಯಾವುದೇ ಘಟನೆ ನಡೆದಾಗ ಕಾಂಗ್ರೆಸ್ ಪಕ್ಷವನ್ನು ದೂರುವುದು ಬಿಜೆಪಿಗೆ ಮಾಮೂಲಾಗಿ ಹೋಗಿದೆ ಎಂದರು. ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರಿಗೆ ಅಲ್ಲಿ ತ್ರೀಶಂಕು ಸ್ಥಿತಿ ನಿರ್ಮಾಣಗೊಂಡು ಮತ್ತೆ ನಮ್ಮ ಪಕ್ಷಕ್ಕೆ ಮರಳಲಿದ್ದಾರೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಲೀಂ, ಗಿರೀಶ್ ಶೆಟ್ಟಿ, ಲತೀಫ್, ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ಹಾಗೂ ವಿವಿಧ ವಲಯ ಕಾಂಗ್ರೆಸ್ ಅಧ್ಯಕ್ಷರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು