Recent Posts

Friday, November 22, 2024
ಬೆಂಗಳೂರು

ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ನೇಣಿಗೆ ಶರಣು; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು-ಕಹಳೆ ನ್ಯೂಸ್

ಬೆಂಗಳೂರು: ಸಿಐಡಿ ಡಿಎಸ್ ಪಿ ಯಾಗಿ ಕಾರ್ಯನಿರ್ವಾಹಿಸುತ್ತಿದ್ದ ವಿ.ಲಕ್ಷ್ಮೀ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ಸೇಹ್ನಿತೆಯ ಮನೆಯಲ್ಲಿ ಲಕ್ಷ್ಮೀ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು 2014ರ ಬ್ಯಾಚ್ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿಯಲ್ಲಿ ಡಿಎಸ್‌ಪಿಯಾಗಿ ನೇಮಕಗೊಂಡಿದ್ದಾರೆ. ಅವರು ಯಾವ ಕಾರಣಕ್ಕಾಗಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇನ್ನೂ ಕೂಡ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 2012 ರಲ್ಲಿ ಹೈದರಾಬಾದ್ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ ಲಕ್ಷ್ಮೀ ಕೋಣನಕುಂಟೆಯಲ್ಲಿ ವಾಸವಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಇವರ ದಾಂಪತ್ಯ ಜೀವನ ಸರಿ ಇರಲಿಲ್ಲ. ಇದೇ ಕೊರಗಿನಲ್ಲೇ ಲಕ್ಷ್ಮೀ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗ್ತಿದೆ. ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಲಕ್ಷ್ಮೀ ತಂದೆ ವೆಂಕಟೇಶ್ ನೀಡಿದ ದೂರಿನ ಅಧಾರದ ಮೇಲೆ ಡಿವೈಎಸ್ ಪಿ ಸೇಹ್ನಿತರಾದ ಮನು, ಪ್ರಜ್ವುಲ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹಾಗೆ ಇವರ ವಿರುದ್ಧ ಐಪಿಸಿ ಸೆಕ್ಷನ್ 174(3) ಅಡಿ ಪ್ರಕರಣ ದಾಖಲಾಗಿತ್ತು. ಲಕ್ಷ್ಮೀ ತಂದೆ ವೆಂಕಟೇಶ್ , ತಮ್ಮ ಮಗಳ ಸಾವಿನ ಬಗ್ಗೆ ಹಲವು ಅನುಮಾನವಿದೆ. ಮನು ಮತ್ತು ಪ್ರಜ್ವುಲ್ ಅವರ ಹೇಳಿಕೆಗಳೂ ಸಾಕಷ್ಟು ಶಂಕೆ ತರುತ್ತಿದೆ ಎಂದು ಆರೋಪಿಸಿದ್ದರು.ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು