Recent Posts

Monday, January 20, 2025
ರಾಜ್ಯ

ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ಸರ್ಕಾರವು ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಚರ್ಚ್ ಗಳಲ್ಲಿ ಹಾಗೂ ಹೋಟೆಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಸಾರ್ವಜನಿಕರು ಸರಳವಾಗಿ ಮತ್ತು ಸುರಕ್ಷಿತವಾಗಿ ಹಬ್ಬ ಆಚರಿಸಬೇಕೆಂದು ವಿನಂತಿಸುತ್ತೇನೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾರ್ಗಸೂಚಿಗಳು ಇಂತಿವೆ :-

ಜಾಹೀರಾತು
ಜಾಹೀರಾತು
ಜಾಹೀರಾತು

*ಕ್ರೈಸ್ತ ಧರ್ಮದ ಚರ್ಚ್‌ಗಳಲ್ಲಿ ಒಂದೇ ಬಾರಿಗೆ ಹೆಚ್ಚು ಜನರು ಸೇರಿದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸೂಚನೆ ನೀಡಲಾಗಿದೆ.

*ಹಬ್ಬದ ಆಚರಣೆ ಸಂದರ್ಭದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಸಾರ್ವಜನಿಕ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇದಿಸಲಾಗಿದೆ.
*ಡಿಸೆಂಬರ್ 30 ರಿಂದ ಜನವರಿ 2ರವರೆಗೆ ಕ್ಲಬ್, ಪಬ್,ರೆಸ್ಟೋರೆಂಟ್ ಹಾಗೂ ಅದೇ ರೀತಿಯ ಸ್ಥಳಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಗ್ಗೂಡುವಿಕೆ, ವಿಶೇಷ ಡಿಜೆ, ಡ್ಯಾನ್ಸ್, ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ ಇತ್ಯಾದಿಯನ್ನು ನಿಷೇಧಿಸಿದೆ.

*ಹೊಸ ವರ್ಷಾಚರಣೆ ಸಂದರ್ಭದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ.

*ಆಯ್ದ ಸ್ಥಳಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಅಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧ ವಿಧಿಸಬಹುದು

*ಸರ್ಕಾರದ ಆದೇಶ ಸಂಖ್ಯೆ: ಕಂಇ 158 ಟಿಎನ್‌ಆರ್ 2020 ದಿನಾಂಕ ನವೆಂಬರ್ 27ರಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅದರಂತೆ ಮುಖ್ಯವಾಗಿ 65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

*ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಪಾಲ್‌ಗಳು, ಪಬ್ ಹಾಗೂ ಅಂತಹ ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಜನರನ್ನು ಸರದಿಯಲ್ಲಿಪ್ರವೇಶಿಸಲು ಅವಕಾಶ ಮಾಡಿಕೊಡಬೇಕು.

*ಪ್ರಾಂಗಣದಲ್ಲಿ, ಉಪಹಾರ ಸ್ಥಳಗಳಲ್ಲಿ, ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು.

*ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು

*ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡಸಂಹಿತೆ ಸೆಕ್ಷನ್ 188ರ ಅಡಿ ಶಿಸ್ತಿನ, ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.