Sunday, January 19, 2025
ಸುದ್ದಿ

2018ರ ಕರ್ನಾಟಕ ಮಹಾಯುದ್ಧ: ಮೇ 12ಕ್ಕೆ ಚುನಾವಣೆ, ಮೇ 15ಕ್ಕೆ ಫಲಿತಾಂಶ

ನವದೆಹಲಿ: ಬಹುನೀರಿಕ್ಷಿತ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಮೇ 12 ರಂದು ಚುನಾವಣೆ ನಡೆಯಲಿದ್ದು, ಮೇ 18ರಂದು ಫಲಿತಾಂಶ ಘೋಷಣೆಯಾಗಲಿದೆ ಅಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ಹೇಳಿದ್ದಾರೆ.

ನವದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿ ನಿರ್ವಾಚನ್ ಸದನ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕರ್ನಾಟಕ ಚುನಾವಣೆಗೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ರಾಜ್ಯದಲ್ಲಿ ಒಟ್ಟು 4.96 ಕೋಟಿ ಮತದಾರರಿದ್ದಾರೆ. ಈ ಬಾರಿ 36 ಲಕ್ಷದಷ್ಟು ಮತದಾರರ ಸಂಖ್ಯೆ ಹೆಚ್ಚಳವಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೇ 28ರಂದು ಹಾಲಿ ವಿಧಾನಸಭೆ ಅವಧಿ ಅಂತ್ಯವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಹೀಗಾಗಿ ಇಂದಿನಿಂದಲೇ ಸರ್ಕಾರ ಯಾವುದೇ ನಿರ್ಧಾರ, ಘೋಷಣೆ ಮಾಡುವಂತಿಲ್ಲ ಅಂತ ಅವರು ತಿಳಿಸಿದ್ದಾರೆ.