Sunday, January 19, 2025
ಬೆಂಗಳೂರು

ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮವನ್ನು ಸರಳವಾಗಿ ಆಚರಿಸಲು ಸರ್ಕಾರದ ಆದೇಶ- ಕಹಳೆ ನ್ಯೂಸ್

ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಸೋಂಕು ಸದ್ಯದಲ್ಲಿ ನಿಯಂತ್ರಣಕ್ಕೆ ಬರುತ್ತಿರುವಂತೆಯೇ ಇದೀಗ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಾಮಾಜಿಕ ಆಚರಣೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಎಚ್ಚರಿಕೆಯಿಂದ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ ಅವರು ಸುತ್ತೋಲೆಯನ್ನ ಹೊರಡಿಸಿದ್ದಾರೆ. ಆಚರಣೆಯ ಸಂದರ್ಭದಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಜನರು ಸೇರುವ ಸಾಧ್ಯತೆಗಳಿವೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು