Sunday, January 19, 2025
ಬೆಂಗಳೂರು

ಶಾಲೆ ಪುನರಾಂಭದ ಬಗ್ಗೆ ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯುಸಿ ತರಗತಿಗಳ ಪುನಾರಾರಂಭಕ್ಕೆ ಸಂಬಂಧಪಟ್ಟಂತೆ ನಾಳೆ ಸಿ.ಎಂ.ಬಿಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆ ನಾಳೆ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲ್ಲಿದ್ದು, ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.ಹಾಗೆ ನಾಳೆ ನಡೆಯುವ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯು ತರಗತಿಗಳ ಸ್ಥಿತಿಗತಿ ನೋಡಿಕೊಂಡು ಇನ್ನುಳಿದ ತರಗತಿಗಳನ್ನು ಪುನರಾರಂಭ ಮಾಡುವ ಬಗ್ಗೆ ಮತ್ತು ವಿದ್ಯಾಗಮ ಯೋಜನೆ ಜಾರಿಗೆ ‌ಸಂಬಂಧಪಟ್ಟಂತೆ ಚರ್ಚೆ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು ಶಾಲಾ ಕಾಲೇಜು ತರಗತಿಗಳು ನಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಬೇಕೆಂದು ಪತ್ರ ಬರೆದಿದ್ದಾರೆ. ಈ ಕಾರಣದಿಂದಾಗಿ ಜನವರಿ 1 ರಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯುಸಿ ತರಗತಿಗಳು ಪ್ರಾರಂಭವಾಗುವುದು ಬಹುತೇಕ ಖಚಿತವಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು