ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿರುವ ಕಾರಣ, ಇಂದು ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯುತ್ತಿರುವ ಸಿಎಂ ನೇತೃತ್ವದ ಸಭೆ ಮಹತ್ವದ್ದಾಗಿದ್ದು, ಜನವರಿ 1ರಿಂದ ರಾಜ್ಯದಲ್ಲಿ ಶಾಲೆಗಳು, ಪಿಯು ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡ್ತಾರಾ ಎನ್ನುವ ಬಗ್ಗೆ ಕಾದು ನೋಡಬೇಕಿದೆ.
ಈಗಾಗಲೇ ತಾಂತ್ರಿಕ ಶಿಕ್ಷಣ ಸಮಿತಿ ಹಾಗೂ ಆರೋಗ್ಯ ಇಲಾಖೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಎರಡು ಸಮಿತಿಗಳು ಶಾಲಾ-ಕಾಲೇಜು ಜನವರಿಯಿಂದ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪುನರಾರಂಭಿಸಲು ಅನುಮತಿಸಿವೆ. ಈ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿವಿಧ ಹಂತದ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದೆ.
ಇಂತಹ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ತಾಂತ್ರಿಕ ಸಮಿತಿ, ಆರೋಗ್ಯ ಇಲಾಖೆಯ ಮುಖ್ಯಸ್ಥರು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆ ಮಹತ್ವದ್ದಾಗಿದ್ದು, ಇಂದು ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಮಹತ್ವದ ನಿರ್ಧಾರವನ್ನು ಕೂಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಕಟಿಸಲಿದ್ದಾರೆ. ಜನವರಿಯಿಂದ ಶಾಲಾ-ಕಾಲೇಜು ಆರಂಭದ ಬಗ್ಗೆ ಅನುಮತಿ ನೀಡುತ್ತಾ ಸರ್ಕಾರ ಎನ್ನುವ ಬಗ್ಗೆ ಕಾದ ನೋಡಬೇಕಿದೆ.